ಕುಂಬಳೆ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ೨೦೨೪-೨೫ ನೇ ಶೈಕ್ಷಣಿಕ ವರ್ಷದ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಮಂಗಳವಾರ ಶಾಲಾ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು ವಹಿಸಿದರು. ಮುಖ್ಯೋಪಾಧ್ಯಾಯ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವ್ಯವಸ್ಥಾಪಕ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಪ್ರಾಂಶುಪಾಲ ರಾಮಚಂದ್ರ ಭಟ್ ಎನ್, ಗಣಿತ ವಿಭಾಗದ ಮುಖ್ಯಸ್ಥ ಶಶಿಕುಮಾರ್ ಪಿ ಹಾಗೂ ರಕ್ಷಿತ್ ಕುಮಾರ್ ಎಂ ಶುಭ ನುಡಿಗಳನ್ನಾಡಿದರು. ಶ್ವೇತಾ ಕುಮಾರಿ ಎಂ.ಹಿAದಿನ ವರ್ಷದ ವಾರ್ಷಿಕ ವರದಿಯನ್ನು ವಾಚಿಸಿದರು.
ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿಯನ್ನು ಈ ಸಂದರ್ಭದಲ್ಲಿ ರೂಪಿಸಲಾಯಿತು. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಶಾಲಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಲ್ಲಿ ಹೆತ್ತವರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮಕ್ಕೆ ಸೂರ್ಯನಾರಾಯಣ ಭಟ್ ಪ್ರಾರ್ಥನೆ ಹಾಡಿದರು. ಸುನಿತಾ ಸ್ವಾಗತಿಸಿ, ಉಮಾದೇವಿ ವಂದಿಸಿದರು. ಶಶಿಧರ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.