ತಿರುವನಂತಪುರಂ: ಕೇರಳದಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ.
ಜುಲೈ. 12 ಮತ್ತು 13 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಉತ್ತರ ಕೇರಳದ ಕರಾವಳಿಯಿಂದ ಮಹಾರಾಷ್ಟ್ರ ಕರಾವಳಿಯವರೆಗೆ ಕಡಮೆ ಒತ್ತಡದ ಕಾರಣ ಕೇರಳದಲ್ಲಿ ವ್ಯಾಪಕ ಮಳೆಗೆ ಕಾರಣವಾಗುತ್ತದೆ. ಇಂದು ರಾತ್ರಿಯವರೆಗೆ ಕೇರಳ ಮತ್ತು ತಮಿಳುನಾಡು ಕರಾವಳಿಯಲ್ಲಿ ಪ್ರಕ್ಷುಬ್ದ ವಿದ್ಯಮಾನ ಮತ್ತು ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಮತ್ತು ಕರಾವಳಿ ನಿವಾಸಿಗಳು ಜಾಗರೂಕರಾಗಿರಬೇಕು.
ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಉತ್ತರ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪದ ಕರಾವಳಿಯಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಹವಾಮಾನ ವರದಿ ಪ್ರಕಾರ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.