ಲಾಹೋರ್: ನ್ಯಾಯಮೂರ್ತಿ ಆಲಿಯಾ ನೀಲಂ ಅವರು ಗುರುವಾರ ಪಾಕಿಸ್ತಾನದ ಲಾಹೋರ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಇವರು ನ್ಯಾಯಾಲಯದಲ್ಲಿ ಉನ್ನತ ಹುದ್ದೆ ಅಲಂಕರಿಸಿದ ಪಾಕಿಸ್ತಾನದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ.

ಪಂಜಾಬ್ ಗವರ್ನರ್ ಸರ್ದಾರ್ ಸಲೀಂ ಹೈದರ್ ಖಾನ್ ಅವರು ಆಲಿಯಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ಮರ್ಯಾಮ್ ನವಾಜ್ ಅವರೂ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ನವೆಂಬರ್ 12, 1966ರಂದು ಜನಸಿರುವ ನೀಲಂ ಅವರು ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ಪದವಿ ಪಡೆದು ಬಳಿಕ 1996ರಲ್ಲಿ ವಕೀಲರಾಗಿ ವೃತ್ತಿ ಪ್ರಾರಂಭಿಸಿದರು.