ಕುಂಬಳೆ: ಕುಂಬಳೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾಸರಗೋಡು ಬ್ಲಾಕ್ ಪಂಚಾಯತಿ ಯೋಜನೆಯಡಿಯಲ್ಲಿ ಸಹಾಯಕ ಶಸ್ತ್ರಚಿಕಿತ್ಸಕ, ಫಾರ್ಮಾಸಿಸ್ಟ್ ಲ್ಯಾಬ್ ಟೆಕ್ನಿಷಿಯನ್ ಮತ್ತು ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತದೆ. ಸಂದರ್ಶನ ಇಂದು(ಜುಲೈ 4) ಬೆಳಿಗ್ಗೆ 11 30, ಮಧ್ಯಾಹ್ನ 12 ಮತ್ತು ಮಧ್ಯಾಹ್ನ 12 30 ಕ್ಕೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಕುಂಬಳೆ ಸಾಮಾಜಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.