ಕಾಸರಗೋಡು: ಹಿರಿಯ ನಾಗರಿಕರ ಕಲ್ಯಾಣ ಸಮಿತಿ ಸಭೆ ಜುಲೈ ೩೦ ರಂದು ಬೆಳಿಗ್ಗೆ ೧೦.೩೦ ಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಸಲಿದೆ. ಜಿಲ್ಲೆಯಲ್ಲಿ ವಿವಿಧ ವೃದ್ಧಾಪ್ಯ ಕಲ್ಯಾಣ ಯೋಜನೆಗಳಿಗೆ ಸಂಬAಧಿಸಿ ಗೃಹ, ಸ್ಥಳೀಯಾಡಳಿತ, ಕಂದಾಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಆಯುಷ್ ಮತ್ತು ಸಾಮಾಜಿಕ ನ್ಯಾಯ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಸಮಿತಿ ಜಿಲ್ಲೆಯಲ್ಲಿರುವ ಸರ್ಕಾರಿ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಸೌಲಭ್ಯಗಳ ಬಗ್ಗೆ ಪರಿಶೀಲನೆಯನ್ನೂ ನಡೆಸಲಿದೆ.