HEALTH TIPS

ಭಾರತಕ್ಕೆ ವಿಯೆಟ್ನಾಂ ಪ್ರಧಾನಿ ಭೇಟಿ:ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆ

          ವದೆಹಲಿ: ವಿಯೆಟ್ನಾಂ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಉಭಯ ರಾಷ್ಟ್ರಗಳ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದಾಗಿದೆ.

           ನಿನ್ನೆ( ಮಂಗಳವಾರ) ತಡರಾತ್ರಿ ದೆಹಲಿಗೆ ಆಗಮಿಸಿದ ಫಾಮ್ ಮಿನ್ ಚಿನ್ಹ್ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.


             'ದೆಹಲಿಗೆ ಆಗಮಿಸಿರುವ ವಿಯೆಟ್ನಾಂನ ಪ್ರಧಾನಿ ಫಾಮ್ ಮಿನ್ ಚಿನ್ಹ್ ಅವರಿಗೆ ಆತ್ಮೀಯ ಸ್ವಾಗತ, ಭಾರತ ಮತ್ತು ವಿಯೆಟ್ನಾಂ ಪರಸ್ಪರ ನಂಬಿಕೆಯ ಆಧಾರದ ಮೇಲೆ ದೀರ್ಘಕಾಲದ ಸ್ನೇಹವನ್ನು ಹಂಚಿಕೊಂಡಿವೆ. ಈ ಭೇಟಿಯು ನಮ್ಮ ಬಾಂಧವ್ಯ ವೃದ್ಧಿಸಲಿವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

              ಆಗಸ್ಟ್ 1ರಂದು ಭೇಟಿ ನೀಡುವ ನಾಯಕನಿಗೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಸ್ವಾಗತವನ್ನು ನೀಡಲಾಗುವುದು. ನಂತರ ಚಿನ್ಹ್ ಅವರು ಮಹಾತ್ಮಾ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಲು ರಾಜ್‌ಘಾಟ್‌ಗೆ ಭೇಟಿ ನೀಡಲಿದ್ದಾರೆ. ಅಂದೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.

            ಚಿನ್ಹ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

                  2016ರ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ವಿಯೆಟ್ನಾಂಗೆ ಭೇಟಿ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries