HEALTH TIPS

ಯಕ್ಷ ಕಲಾವಿದ ಕುಂಬಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

             ಮಂಗಳೂರು: ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

            ಪುತ್ತೂರು ತಾಲ್ಲೂಕಿನ 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟರು. ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ.‌

              1948ರಲ್ಲಿ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರರಾಗಿ ಜನಿಸಿದ ಶ್ರೀಧರ ರಾವ್‌, 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆಯಲ್ಲಿ ವಾಸವಾಗಿದ್ದರು. ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೊದಲಾದ ಮೇಳಗಳಲ್ಲಿ ಆರು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದರು.

            ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದ ಶ್ರೀಧರ ರಾವ್‌ ಪುರುಷ ವೇಷದಲ್ಲಿಯೂ ಮಿಂಚಿದ್ದರು. ದೇವಿ ಮಹಾತ್ಮೆಯ ದೇವಿ, ಸೀತಾ ಪರಿತ್ಯಾಗದ ಸೀತೆ, ಸುದರ್ಶನ ವಿಜಯದ ಲಕ್ಷ್ಮಿ, ದಮಯಂತಿ ಸ್ವಯಂವರದ ದಮಯಂತಿ, ಭೀಷ್ಮ ವಿಜಯದ ಅಂಬೆ ಪಾತ್ರ ಪ್ರೇಕ್ಷಕರ ಮನದಲ್ಲಿ ಅಚ್ಚೊತ್ತಿದೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಅವರಿಗೆ ದೊರೆತಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries