ಗೊಂಡಾ: ಚಂಡೀಗಢ- ದಿಬ್ರುಗಢ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಗುರುವಾರ ಹಳಿತಪ್ಪಿವೆ.
ಗೊಂಡಾ: ಚಂಡೀಗಢ- ದಿಬ್ರುಗಢ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಗುರುವಾರ ಹಳಿತಪ್ಪಿವೆ.
ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಮೋತಿಗಂಜ್- ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ- ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಮಧ್ಯಾಹ್ನ 2.35ರ ಹೊತ್ತಿಗೆ ಹಳಿತಪ್ಪಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಯಾಣಿಕರನ್ನು ರಕ್ಷಿಸುವ ಕಾರ್ಯಚರಣೆ ಮುಂದುವರಿದಿದೆ.
ಸ್ಥಳದಲ್ಲಿ 40 ಜನರ ವೈದ್ಯಕೀಯ ತಂಡ ಮತ್ತು 15 ಆಂಬುಲೆನ್ಸ್‌ಗಳಿವೆ. ಇನ್ನಷ್ಟು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್ ಸ್ಥಳಕ್ಕೆ ಧಾವಿಸುತ್ತಿದೆ ಎಂದು ಉತ್ತರ ಪ್ರದೇಶ ವಿಪತ್ತು ನಿರ್ವಹಣಾ ಪರಿಹಾರ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಹಿನ್ನೆಲೆ ಭಾರತೀಯ ರೈಲ್ವೆ ಇಲಾಖೆ ಸಹಾಯವಾಣಿಯನ್ನು ತೆರೆದಿದೆ.