HEALTH TIPS

'ಸತ್ಸಂಗ' ಆಯೋಜಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ

        ಖನೌ: ಉತ್ತರ ಪ್ರದೇಶದ ಹಾಥರಸ್‌ ಜಿಲ್ಲೆಯ ಫೂಲರಾಯ್ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ 'ಸತ್ಸಂಗ'ದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಾಗಿದೆ.


            ಘಟನೆ ಸಂಬಂಧ ಕಾರ್ಯಕ್ರಮ ಆಯೋಜಕರಾದ ದೇವಪ್ರಕಾಶ್ ಮಧುಕರ್ ಸೇರಿದಂತೆ ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ 2023ರ ಸೆಕ್ಷನ್ 105, 110, 126 (2), 223 ಮತ್ತು 238ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

         'ಸತ್ಸಂಗ' ನಡೆಸಲು ಅನುಮತಿ ಕೋರಿ ಕಾರ್ಯಕ್ರಮದ ಆಯೋಜಕರು ಸಲ್ಲಿಸಿದ ಅರ್ಜಿಯಲ್ಲಿ 80 ಸಾವಿರ ಭಕ್ತರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, ಕಾಲ್ತುಳಿತಕ್ಕೆ ಜನದಟ್ಟಣೆಯೇ ಕಾರಣವಾಗಿದೆ. ಇದು ಆಯೋಜಕರ ಕಡೆಯಿಂದ ಆಗಿರುವ ಲೋಪ ಎಂದು ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.

         'ಸತ್ಸಂಗ' ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸರ್ಕಾರ್ ವಿಶ್ವಹರಿ ಭೋಲೆಬಾಬಾ ಅವರ ಬೆಂಗಾವಲು ವಾಹನಗಳ ಸಂಚಾರಕ್ಕಾಗಿ ಒಂದು ದ್ವಾರವನ್ನು ಆಯೋಜಕರು ಮುಚ್ಚಿದ್ದರಿಂದ ಮತ್ತೊಂದು ದ್ವಾರದ ಮೇಲೆ ಒತ್ತಡ ಹೆಚ್ಚಾಯಿತು. ಜತೆಗೆ, ಭೋಲೆಬಾಬಾ ಅವರಿದ್ದ ವಾಹನದ ಹಿಂದೆ ಭಕ್ತರು ಓಡುತ್ತಿದ್ದರು. ಕೆಲವರು ಸ್ಥಳದಿಂದ ಮಣ್ಣು ಸಂಗ್ರಹಿಸಲು ಮುಗಿಬಿದ್ದಿದ್ದು ಕೂಡ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸಿಂಗ್ ಹೇಳಿದ್ದಾರೆ.

             ಕಾಲ್ತುಳಿತದಲ್ಲಿ ಕನಿಷ್ಠ 121 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಈ ಪೈಕಿ 72 ಮೃತರ ಗುರುತು ಪತ್ತೆಯಾಗಿದ್ದು, ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries