ಪಣಜಿ: ಭಾರಿ ಮಳೆಯಿಂದಾಗಿ ಗುರುವಾರ ನಸುಕಿ ಜಾವ ಗೋವಾದ ಘಾಟ್ ವಿಭಾಗದಲ್ಲಿ ಗುಡ್ಡ ಕುಸಿದಿದ್ದು, ಬೃಹತ್ ಮಣ್ಣಿನ ರಾಶಿ ರಸ್ತೆಗೆ ಬಿದ್ದಿದೆ. ಪರಿಣಾಮ ಗೋವಾ-ಕರ್ನಾಟಕ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಗೋವಾದ ದಕ್ಷಿಣ ಗಡಿಯಲ್ಲಿರುವ ಅನಮೋಡ್ ಘಾಟ್ ಪ್ರದೇಶದ ಶ್ರೀ ದೂಧ್‌ಸಾಗರ್ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ.
ಅನಮೋಡ್ ಘಾಟ್ ವಿಭಾಗದಿಂದ ಕರ್ನಾಟಕದ ಬೆಳಗಾವಿ ಮತ್ತು ಖಾನಾಪುರಕ್ಕೆ ಸಂಚಾರ ಸ್ಥಗಿತಗೊಂಡಿದೆ ಎಂದು ಅವರು ಹೇಳಿದರು.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗೋವಾದಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕಳೆದ ಒಂದು ದಿನದಲ್ಲಿ ಉತ್ತರ ಗೋವಾ ಮತ್ತು ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಐಎಂಡಿ ಪ್ರಕಾರ ದಕ್ಷಿಣ ಗೋವಾದ ಪೊಂಡಾ ತಾಲ್ಲೂಕಿನಲ್ಲಿ ಅತಿ ಹೆಚ್ಚು 190 ಸೆಂ.ಮೀ. ಮಳೆಯಾಗಿದೆ.