HEALTH TIPS

ಬಾಂಗ್ಲಾದೇಶ ಮೀಸಲಾತಿ ಹೋರಾಟ: ಕರ್ಫ್ಯೂ ವಿಸ್ತರಣೆ

 ಢಾಕಾ: ಉದ್ಯೋಗ ಮೀಸಲಾತಿ ಸಂಬಂಧ ಇಂದು ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದ್ದು, ಕರ್ಫ್ಯೂವನ್ನು ಭಾನುವಾರವೂ ವಿಸ್ತರಿಸಲಾಗಿದೆ.

ಶುಕ್ರವಾರದಿಂದ ಜಾರಿಯಲ್ಲಿದ್ದ ಕರ್ಫ್ಯೂವನ್ನು ಭಾನುವಾರ ಮಧ್ಯಾಹ್ನ 3 ಗಂಟೆವರೆಗೆ ವಿಸ್ತರಿಸಲಾಗಿದೆ. ಅನಿರ್ದಿಷ್ಟಾವಧಿವರೆಗೆ ಮುಂದುವರಿಯಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಎರಡು ಗಂಟೆಗಳ ಬಿಡುವು ಇರಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಹಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಭಾri ಪ್ರತಿಭಟನೆ ನಡೆಯುತ್ತಿದ್ದು, ಈವರೆಗೂ 114 ಮಂದಿ ಸಾವಿಗೀಡಾಗಿದ್ದಾರೆ.

ಭದ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದ ರಾಜಧಾನಿ ಢಾಕಾದ ಬೀದಿಗಳಲ್ಲಿ ಸೈನಿಕರು ಗಸ್ತು ತಿರುಗುತ್ತಿದ್ದಾರೆ. ಗುರುವಾರದಿಂದ ಇಂಟರ್ನೆಟ್‌ ಹಾಗೂ ಟೆಕ್ಸ್ಟ್‌ ಮೆಸೇಜ್ ಸೌಲಭ್ಯಗಳನ್ನು ನಿರ್ಬಂಧಿಸಲಾಗಿದೆ.

ಬುಧವಾರದಿಂದಲೇ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳು ಮುಚ್ಚಿವೆ.

ಪಾಕಿಸ್ತಾನ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕುಟುಂಬಗಳಿಗೆ ಶೇ 30 ಸೇರಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವ ಸರ್ಕಾರ ನಿರ್ಧಾರದ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

2018ರಲ್ಲಿ ಶೇಖ್ ಹಸೀನಾ ಸರ್ಕಾರ ಈ ಕೋಟಾ ಪದ್ಧತಿಯನ್ನು ರದ್ದು ಮಾಡಿತ್ತು. ಆದರೆ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಅದನ್ನು ಮರುಸ್ಥಾಪಿಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries