HEALTH TIPS

ಇಮ್ರಾನ್ ಖಾನ್ ಪಕ್ಷ 'ಪಿಟಿಐ' ನಿಷೇಧಕ್ಕೆ ಮುಂದಾದ ಪಾಕಿಸ್ತಾನ ಸರ್ಕಾರ

            ಸ್ಲಾಮಾಬಾದ್‌: ಪ್ರಮುಖ ವಿರೋಧ ಪಕ್ಷ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ 'ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್' (ಪಿಟಿಐ) ಪಕ್ಷವನ್ನು ನಿಷೇಧ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಸೋಮವಾರ ಹೇಳಿದೆ. ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಹೊರಿಸಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

           'ಪಿಟಿಐ ಪಕ್ಷವು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ. ಹೀಗಾಗಿ ಫೆಡರಲ್ ಸರ್ಕಾರವು (ಕೇಂದ್ರ ಸರ್ಕಾರ) ಅದನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದೆ' ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.

              'ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದಕ್ಕೆ ಸ್ಪಷ್ಟ ಸಾಕ್ಷ್ಯಗಳಿದ್ದು, ತೆಹ್ರಿಕ್-ಎ-ಇನ್ಸಾಫ್ ಪಕ್ಷವನ್ನು ನಿಷೇಧಿಸುವ ಪ್ರಕ್ರಿಯೆಯನ್ನು ಸರ್ಕಾರ ಪ್ರಾರಂಭಿಸಲಿದೆ' ಎಂದು ತರಾರ್ ಹೇಳಿದ್ದಾರೆ.

             ಅಕ್ರಮ ಮದುವೆ ಸೇರಿ ಹಲವು ಪ್ರಕರಣಗಳಲ್ಲಿ ಇಮ್ರಾನ್ ಖಾನ್ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಈ ನಿರ್ಧಾರ ಹೊರಬಿದ್ದಿದೆ.

               ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ 71 ವರ್ಷದ ಇಮ್ರಾನ್ ಖಾನ್‌ ಅವರು ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries