ಕಾಸರಗೋಡು: ಪರಿಶಿಷ್ಟ ವರ್ಗ ಅಭಿವೃದ್ಧಿ ಇಲಾಖೆಯು ೨೦೨೩-೨೪ನೇ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಎಸ್ಸೆಸೆಲ್ಸಿ, ಪ್ಲಸ್ ಟು, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಿದೆ.
ಮೊದಲ ಹಂತದಲ್ಲಿ ಎಸ್ಸೆಸೆಲ್ಸಿ, ಪ್ಲಸ್ ಟು ಪರೀಕ್ಷೆಗಳಲ್ಲಿ ಎಲ್ಲಾ ವಿಷಯಗಳಲ್ಲಿ ಬಿ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳು, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಶೇ.೬೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತದೆ.
ಪ್ರಥಮ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಕಾಸರಗೋಡು ಗಿರಿಜನ ಅಭಿವೃದ್ಧಿ ಕಛೇರಿಯ ಅಧೀನದಲ್ಲಿರುವ ಧನ ಸಹಾಯ ಪಡೆಯಲು ಅರ್ಹರಾಗಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಆಗಸ್ಟ್ ೮ರ ಮೊದಲು ಎಣ್ಮಕಜೆ, ಕಾಸರಗೋಡು ಮತ್ತು ನೀಲೇಶ್ವರ ಗಿರಿಜನ ವಿಸ್ತರಣಾ ಕಛೇರಿಗಳಿಗೆ ಸಲ್ಲಿಸಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ(೦೪೯೯೪-೨೫೫೪೬೬)ಸAಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.