ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಸೇನಾ ಪಡೆಗಳು ಗುರುವಾರ ಕೊಂದು ಹಾಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಕೀರನ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯ ಕಣಿವೆಯಲ್ಲಿ ಉಗ್ರರು ಒಳನುಸುಳುವ ಯತ್ನ ಮಾಡುತ್ತಿದ್ದಾರೆ ಎನ್ನುವ ಗುಪ್ತಚರ ಮಾಹಿತಿಯನ್ವಯ ಸೇನಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.