ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳ ಕುರಿತು ವಿಸ್ತೃತ ವರದಿಯನ್ನು ಏಳು ದಿನಗಳಲ್ಲಿ ಸಲ್ಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (ಎನ್‌ಸಿಎಸ್‌ಸಿ) ಸೂಚಿಸಿದೆ.

ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಸಲಾಗಿದೆ ಎಂಬ ಆರೋಪಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಆಧರಿಸಿ ಆಯೋಗವು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದೆ.
ಈ ಕುರಿತು ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಆಯೋಗವು, 'ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ತೆಗೆದಿರಿಸಲಾಗಿದ್ದ ₹14,730 ಕೋಟಿಯನ್ನು 'ಐದು ಗ್ಯಾರಂಟಿ ಯೋಜನೆ' ಹೆಸರಿನಡಿ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಮರುಹಂಚಿಕೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ' ಎಂದು ವಿವರಿಸಿದೆ.
ಪರಿಶಿಷ್ಟ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭ್ಯುದಯಕ್ಕಾಗಿ ಈ ನಿಧಿಗಳ ಬಳಕೆಯ ಮಹತ್ವವನ್ನು ಸಹ ಆಯೋಗವು ಪತ್ರದಲ್ಲಿ ವಿವರಿಸಿದೆ.