ಮುಂಬೈ:ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಆದೇಶವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸ್ವಾಗತಿಸಿದೆ.
ಮುಂಬೈ:ರಾಷ್ಟ್ರ ನಿರ್ಮಾಣದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಆದೇಶವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸ್ವಾಗತಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘವು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದು, ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಲು ಸರ್ಕಾರಿ ನೌಕರರಿಗೆ ಇದುವರೆಗೂ ಇದ್ದ ನಿರ್ಬಂಧವನ್ನು ಮುಕ್ತಗೊಳಿಸಿ ಕೇಂದ್ರ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘವು ಕಳೆದ 99 ವರ್ಷಗಳಿಂದ ರಾಷ್ಟ್ರದ ಪುನರ್ ನಿರ್ಮಾಣ ಮತ್ತು ಸಮಾಜದ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು, ರಾಷ್ಟ್ರೀಯ ಸುರಕ್ಷತೆ, ಏಕತೆ-ಅಖಂಡತೆ ಮತ್ತು ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ ಸಮಾಜದ ಜೊತೆಗೆ ನಿಂತು ಸಂಘ ಯೋಗದಾನವನ್ನು ನೀಡಿದೆ. ಕಾಲ ಕಾಲಕ್ಕೆ ದೇಶದ ನೇತೃತ್ವ ವಹಿಸಿದ್ದ ವಿವಿಧ ನಾಯಕರು ಸಂಘದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಆದರೆ ರಾಜಕೀಯ ಹಿತಾಸಕ್ತಿಗಳಿಂದಾಗಿ ಆಗಿನ ಸರ್ಕಾರ, ರಾಷ್ಟ್ರೀಯ ಸ್ವಯಂಸೇವಕ ಸಂಘದಂತಹ ಸೃಜನಶೀಲ ಸಂಸ್ಥೆಗಳ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧ ಹೇರಿತ್ತು. ಪ್ರಸ್ತುತ ಸರ್ಕಾರವು ನಿಷೇಧವನ್ನು ತೆರವುಗೊಳಿಸಿ ಹೊಸ ಆದೇಶ ಮಾಡಿದ್ದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲವರ್ಧನೆಗೆ ಈ ಆದೇಶ ಪೂರಕವಾಗಿದೆ ಎಂದು ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.