ಇಡುಕ್ಕಿ: ಕುಮಳಿಯಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ.
ಕುಮಳಿ 66ನೇ ಮೈಲ್ ಬಳಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದಾಗ ಕಾರಿನೊಳಗೆ ವ್ಯಕ್ತಿಯೊಬ್ಬರು ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.
ಕಾರಿನಲ್ಲಿ ಇಬ್ಬರಿದ್ದ ಶಂಕೆ ವ್ಯಕ್ತವಾಗಿದೆ. ಆದರೆ ನಂತರ ಒಬ್ಬರಿದ್ದರೆಂಬುದನ್ನು ದೃಢಪಡಿಸಲಾಗಿದೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.