ನವದೆಹಲಿ: ಕೇಂದ್ರದ ಮಾಜಿ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ಅವರು ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆಯಾಗಿ ನೇಮಕಗೊಂಡಿದ್ದು, ಆಗಸ್ಟ್ 1ರಂದು (ಗುರುವಾರ) ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಚೆಗೆ ಯುಪಿಎಸ್‌ಸಿ ಅಧ್ಯಕ್ಷರಾಗಿದ್ದ ಮನೋಜ್ ಸೋನಿ ಅವರು ತಮ್ಮ ಅಧಿಕಾರಾವಧಿ ಮುಗಿಯುವ 5 ವರ್ಷಗಳ ಮುನ್ನ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.
ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರ ನೇಮಕಾತಿ ಕುರಿತ ವಿವಾದ ಮತ್ತು ಆರೋಪಗಳಿಗೂ ಮನೋಜ್ ಅವರ ರಾಜೀನಾಮೆಗೂ ಸಂಬಂಧ ಇಲ್ಲ ಎಂದು ಅವರು ಹೇಳಿದ್ದರು. 'ಯುಪಿಎಸ್‌ಸಿ ಅಧ್ಯಕ್ಷರು 15 ದಿನಗಳ ಹಿಂದೆಯೇ ವೈಯಕ್ತಿಕ ಕಾರಣ ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ. ಅದಿನ್ನೂ ಅಂಗೀಕಾರ ಆಗಿಲ್ಲ' ಎಂದು ಮೂಲಗಳು ಸ್ಪಷ್ಟಪಡಿಸಿದ್ದವು.