ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತಯಬಾ (ಎಲ್‌ಇಟಿ) ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಜತೆಗೆ ನಂಟು ಹೊಂದಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬಂಧಿಸಿದೆ ಎಂದು ವರದಿಯಾಗಿದೆ.
ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತಯಬಾ (ಎಲ್‌ಇಟಿ) ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಜತೆಗೆ ನಂಟು ಹೊಂದಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಬಂಧಿಸಿದೆ ಎಂದು ವರದಿಯಾಗಿದೆ.
ಅಕ್ರಮವಾಗಿ ಮಾದಕ ದ್ರವ್ಯ ಸಾಗಾಟ ಮತ್ತು ಭಯೋತ್ಪಾದನೆಗೆ ಸಂಬಂಧ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿವಾಸಿ ಸೈಯದ್ ಸಲೀಂ ಜಹಾಂಗೀರ್ ಅಂದ್ರಾಬಿ ಅಲಿಯಾಸ್ ಸಲೀಂ ಅಂದ್ರಾಬಿನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಲೀಂ ಅಂದ್ರಾಬಿಯು ಕಳೆದ ಮೂರುವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ, ಐಪಿಸಿ ಮತ್ತು ಯುಎ (ಪಿ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಜತೆಗೆ, ಆರೋಪಿಯ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎನ್‌ಐಎ ಪ್ರಕಟಣೆ ಹೊರಡಿಸಿತ್ತು.
ಗಡಿಯಾಚೆಗಿನ ಭಯೋತ್ಪಾದನೆಗೆ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.