ಇಂಫಾಲ್: ಮಣಿಪುರದ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಇಂಫಾಲ್: ಮಣಿಪುರದ ಇಂಫಾಲ್ ಪೂರ್ವ ಮತ್ತು ಪಶ್ಚಿಮ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
'ಇಂಫಾಲ್ ಪೂರ್ವ ಜಿಲ್ಲೆಯ ಹೈನ್‌ಗ್ಯಾಂಗ್ ಚಿಂಗ್‌ನಲ್ಲಿ ಶನಿವಾರ ಕಾರ್ಯಾಚರಣೆ ನಡೆಸಲಾಗಿದ್ದು, ಒಂದು ಎಕೆ 56 ಬಂದೂಕು, 2 ಇತರ ಬಂದೂಕುಗಳು, 3 ಪಿಸ್ತೂಲ್, ಎರಡು ಹ್ಯಾಂಡ್ ಗ್ರೆನೇಡ್, ಮದ್ದು-ಗುಂಡುಗಳನ್ನು ಜಪ್ತಿ ಮಾಡಲಾಗಿದೆ' ಎಂದು ಮಣಿಪುರ ಪೊಲೀಸರ ಪ್ರಕಟಣೆ ತಿಳಿಸಿದೆ.
'ಖುಯತೋಂಗ್ ಮತ್ತು ನಾಗಂಪಾಲ್‌ನಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆಯ ವೇಳೆ ಮೂರು ಬಂದೂಕುಗಳು ಮತ್ತು ಮದ್ದು-ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
'ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿ, ಇಬ್ಬರು ಶಂಕಿತರನ್ನು ಬಂಧಿಸಲಾಗಿದ್ದು, 2 ಪಿಸ್ತೂಲ್ ಮತ್ತು ಜೀವಂತ ಮದ್ದು-ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ' ಎಂದು ತಿಳಿಸಿದ್ದಾರೆ.