ಕೊಟ್ಟಾಯಂ: ರಾಜ್ಯದಲ್ಲಿ ಇಲಿ ಜ್ವರದಿಂದ ಇಬ್ಬರು ಸಾವನ್ನಪ್ಪಿದ್ದು, ಒಬ್ಬರು ಜಾಂಡೀಸ್‍ನಿಂದ ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ.
ಜ್ವರದಿಂದ ಗುರುವಾರ 13,196 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ 145 ಮಂದಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. 416 ಮಂದಿ ಡೆಂಗ್ಯೂ ಜ್ವರದ ಲಕ್ಷಣಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. 42 ಮಂದಿಗೆ ಎಚ್1ಎನ್1 ಜ್ವರ ಇರುವುದು ದೃಢಪಟ್ಟಿದೆ. 10 ಮಂದಿಗೆ ಇಲಿ ಜ್ವರ ದೃಢಪಟ್ಟಿದೆ. ರೋಗ ಹರಡುವಿಕೆ ಮುಂದುವರಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.