ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕಮ್ಕಾರಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಗಡಿ ಕಾರ್ಯ ತಂಡ ನಡೆಸಿದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮ್ಕಾರಿ ವಲಯದ ಬಳಿ ಉಗ್ರರ ಚಲನವಲನಗಳನ್ನು ಪತ್ತೆ ಮಾಡಿದ್ದ ಸೇನೆ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಸೇನೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಉತ್ತರವಾಗಿ ಸೇನೆಯು ಪ್ರತಿದಾಳಿ ನಡೆಸಿತ್ತು. ದಾಳಿಯ ವೇಳೆ ಐವರು ಯೋಧರು ಗಾಯಗೊಂಡಿದ್ದರು.
ಗಾಯಗೊಂಡ ಯೋಧರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನಿ ನುಸುಳುಕೋರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಸೇನೆ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಯತ್ನಗಳು ಹೆಚ್ಚುತ್ತಿದ್ದು, ಗಡಿ ಭಾಗದಲ್ಲಿ ಭದ್ರತೆ ಹೆಚ್ಚಿಸುವ ಸಲುವಾಗಿ ಹೆಚ್ಚಿನ ಸೇನಾ ತುಕಡಿಗಳನ್ನು ಸರ್ಕಾರ ನಿಯೋಜಿಸಿದೆ.