ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸಮಾಜವಾದಿ ಪಕ್ಷದ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿದ್ದು, ಬಾಲಕ ಸೇರಿ ಆರು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸಮಾಜವಾದಿ ಪಕ್ಷದ ಮುಖಂಡನ ನಿವಾಸದ ಮೇಲೆ ಗುಂಡಿನ ದಾಳಿ ನಡೆದಿದ್ದು, ಬಾಲಕ ಸೇರಿ ಆರು ಜನರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ದಶಾಶ್ವಮೇಧ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಮಾಜಿ ಕಾರ್ಪೋರೇಟರ್ ವಿಜಯ್ ಯಾದವ್ ದೂರು ನೀಡಿದ್ದಾರೆ.
ದಾಳಿಯಲ್ಲಿ ಗಾಯಗೊಂಡಿದ್ದ ನಿರ್ಭಯ್ ಯಾದವ್(6), ಕಿರಣ್ ಯಾದವ್, ಉಮೇಶ್ ಯಾದವ್, ದಿನೇಶ್ ಯಾದವ್ ಹಾಗೂ ಶುಭಂ ಅಲಿಯಾಸ್ ಗೋಲು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ದಶಾಶ್ವಮೇಧ ಪೊಲೀಸ್ ಠಾಣಾಧಿಕಾರಿ ರಾಕೇಶ್ ಪಾಲ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಮೋಹಿತ್ ಅಗರ್‌ವಾಲ್ ತಿಳಿಸಿದ್ದಾರೆ.
ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ಸ್ ಮತ್ತು ಸಮಾಜ ವಿರೋಧಿ ಚಟುವಟಿಕೆಗಳ ತಡೆ ಕಾಯ್ದೆ ಹಾಗೂ ರಾಷ್ಟ್ರೀಯ ಭದ್ರತಾ ಕಾಯ್ದೆಯ ಪ್ರಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.