HEALTH TIPS

ಕರಾವಳಿ ಭಾಗದಲ್ಲಿ ಕಲೆಗೆ ನೀಡುತ್ತಿರುವ ಪ್ರೋತ್ಸಾಹ ಅನನ್ಯ: ಸೋಮಣ್ಣ ಬೇವಿನ ಮರದ

         ಕಾಸರಗೋಡು: ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ಬೆಳೆಸುವಂತಹ ಮಹತ್ತರ ಕೆಲಸವು ಗಡಿನಾಡಿನಲ್ಲಿ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕರಾವಳಿ ಭಾಗದವರು ಕಲೆಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

          ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಗಡಿ ಪ್ರಾಧಿಕಾರದ ಸಹಯೋಗದಲ್ಲಿ ನಡೆದ 'ಯಕ್ಷ ವೈಭವ - ಸಾಂಸ್ಕೃತಿಕ ಉತ್ಸವ'ದಲ್ಲಿ ಅವರು ಮಾತನಾಡಿದರು.

            ಕರ್ನಾಟಕ ಸಂಭ್ರಮ-50 ರ ನೆನಪಿನಲ್ಲಿ ಮಂಗಳೂರಿನಲ್ಲಿ ಬೃಹತ್ ಕನ್ನಡ ಕಾರ್ಯಕ್ರಮ ನಡೆಸಲು ರಾಜ್ಯದ 14 ಅಕಾಡೆಮಿಗಳ ನೇತೃತ್ವದಲ್ಲಿ ಸಚಿವರು ಸಭೆ ಕರೆದು ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲಿ ಕನ್ನಡ ಭಾಷೆ, ಕಲೆಗಳನ್ನು ಪ್ರೋತ್ಸಾಹಿಸುವರಿಗೆ ಗೌರವ ಸಲ್ಲಿಸಲು ಯೋಚಿಸಲಾಗಿದೆ ಎಂದರು.

ಕಲೆಗಳನ್ನು ಉಳಿಸಲು ಸರಕಾರದ ಸಹಾಯದ ಅಗತ್ಯವಿದ್ದು, ಅದಕ್ಕಾಗಿ ಗಡಿ ಪ್ರದೇಶ ಅಭಿವೃದ್ಧಿ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಇದಲ್ಲದೇ ಗಡಿನಾಡಿನ ಕನ್ನಡ ಶಾಲೆಗಳಿಗೆ ಅನುದಾನ, ಕನ್ನಡ ಶಾಲೆಗಳಲ್ಲಿ ಕನ್ನಡ ಬಲ್ಲ ಶಿಕ್ಷಕರ ನೇಮಕ ವಿಚಾರ ಸೇರಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.


             ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿ, ಕರಾವಳಿಯಲ್ಲಿ ಯಕ್ಷಗಾನ ಕಲೆ ಜನರ ಬದುಕಿನ ಒಂದು ಭಾಗವಾಗಿದೆ. ಕನ್ನಡ ಉಳಿಸಿ ಬೆಳೆಸುವಲ್ಲಿ ಯಕ್ಷಗಾನದ ಕೊಡುಗೆ ಅನನ್ಯವಾದದ್ದು, ಕನ್ನಡ ಅಸ್ಮಿತೆ ಉಳಿಸುವಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿಯ ಪ್ರಾಧಿಕಾರದ ಸಹಕಾರವು ಮೆರೆಯುವಂತಿಲ್ಲ ಎಂದು ಸ್ಮರಿಸಿದರು.

                 ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಪೋಷಕ, ಸಂಘಟಕ ಹಾಗೂ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ಸ್ವಾಮೀಜಿಯವರು ಗೌರವ ಪೋಷಕ ಸದಸ್ಯತ್ವ ನೀಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಪ್ರಾಧಿಕಾರ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಇತರರು ಇದ್ದರು.

      ಸಿರಿಬಾಗಿಲು ಪ್ರತಿಷ್ಠಾನ ಅಧ್ಯಕ್ಷ ರಾಮಕೃಷ್ಣ ಮಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿ ಸಿರಿಬಾಗಿಲು ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ನಾಲ್ಕು ದಿವಸಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಐದು ಜಿಲ್ಲೆಗಳಿಂದ ತೆಂಕುತಿಟ್ಟು ಹಾಗೂ ಬಡಗುತಿಟ್ಟಿನ  26 ಹವ್ಯಾಸಿ ಯಕ್ಷಗಾನ ತಂಡಗಳು  ಪಾಲ್ಗೊಳ್ಳಲಿವೆ. ಸ್ಥಳೀಯ ಯುವ ಪ್ರತಿಭೆಗಳ ಭರತನಾಟ್ಯ, ಕನ್ನಡ ಭಾವಗೀತೆಗಳ ಗಾಯನ  ನಡೆಯಲಿದೆ. 

                20ರಂದು ಮಧ್ಯಾಹ್ನ 2 ಗಂಟೆಯಿಂದ ಸಿರಿಬಾಗಿಲು ಪ್ರತಿಷ್ಠಾನ ಪ್ರಕಾಶಿಸಿದ 7 ಗ್ರಂಥಗಳ ಕುರಿತಾದ ವಿಚಾರ ಸಂಕಿರಣ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ  ಸಮಾರಂಭದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು,  ಉಪ್ಪಳ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ  ಆಶೀರ್ವಚನ ನೀಡುವರು.  ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅಧ್ಯಕ್ಷತೆ ವಹಿಸುವರು.   



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries