ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ತೋಷ್ ನಲ್ಲಾಹ್‌ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಮದ್ಯದಂಗಡಿ ಸೇರಿದಂತೆ ಮೂರು ತಾತ್ಕಾಲಿಕ ಶೆಡ್‌ಗಳು ಹಾಗೂ ಕಾಲು ಸೇತುವೆ ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು (ಮಂಗಳವಾರ) ಮುಂಜಾನೆ ಮಣಿಕರಣ್‌ನ ತೋಷ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.
'ನದಿ ತೀರ ಪ್ರದೇಶಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ತಿಳಿಸಿದ್ದಾರೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯದ ಏಳು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ 'ಆರೆಂಜ್' ಅಲರ್ಟ್ ಘೋಷಿಸಿದೆ.