ಕಾಸರಗೋಡು : ರಾಜ್ಯದಲ್ಲಿ 202ನೇ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸುವ ನಾಲ್ಕು ವರ್ಷಗಳ ಪದವಿ ಯೋಜನೆಯ ರಾಜ್ಯಮಟ್ಟದ ಉದ್ಘಾಟನೆ ಜುಲೈ 1 ರಂದು ಮಧ್ಯಾಹ್ನ 12 ಗಂಟೆಗೆ ನಡೆಯುವುದು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್‍ಲೈನ್ ಮೂಲಕ ಸಮಾರಂಭ ಉದ್ಘಾಟಿಸುವರು. ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಖಾತೆ ಸಚಿವೆ ಡಾ.ಆರ್.ಬಿಂದು ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದ ನೇರ ಪ್ರಸಾರ ಕಾಸರಗೋಡು ಸರ್ಕಾರಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾಸರಗೋಡು ಸರ್ಕಾರಿ ಕಾಲೇಜು ಮಟ್ಟದ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮದ ಉದ್ಘಾಟನೆಯನ್ನು ಜುಲೈ 1 ರಂದು ಮಧ್ಯಾಹ್ನ 2.30 ಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ನೆರವೇರಿಸುವರು. ನಂತರ ಕಾಲೇಜಿನ ಗ್ರಂಥಾಲಯದಲ್ಲಿ ವಿಕಲಚೇತನರಿಗಾಗಿ ಸಿದ್ಧಪಡಿಸಿರುವ 'ಕಿಬೋ' ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಗ್ಗೆ 10:30 ಗಂಟೆಗೆ ವಿದ್ಯಾರ್ಥಿಗಳಿಗೆ, ಪೆÇೀಷಕರಿಗೆ ಮತ್ತು ಸಾರ್ವಜನಿಕರಿಗಾಗಿ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.