ಇದಕ್ಕೆ ಸಂಬಂಧಿಸಿದಂತೆ ಚೆನ್ನೈ ಹಾಗೂ ಸುತ್ತಮುತ್ತಲಿನ ತಿರುವಳ್ಳೂರು, ಕಾಂಚೀಪುರಂ ಹಾಗೂ ಚೆಂಗಲಪಟ್ಟು ಜಿಲ್ಲೆಗಳಲ್ಲಿ ಶೀಘ್ರದಲ್ಲಿ 4ಜಿ ಸೇವೆ ಲಭ್ಯವಾಗಲಿದೆ ಎಂದು ವರದಿಯಾಗಿದೆ. ತಮಿಳುನಾಡಿನಲ್ಲಿ ಬಿಎಸ್‌ಎನ್‌ಎಲ್ ತನ್ನ IX.2 project ಯೋಜನೆಯಡಿಯಲ್ಲಿ ಈ ಜಿಲ್ಲೆಗಳಲ್ಲಿ 2,114ರಷ್ಟು 4ಜಿ ಟವರ್‌ಗಳನ್ನು ಅಳವಡಿಸುವ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಯೋಜನೆಗೆ ಒಟ್ಟು ₹16.25 ಕೋಟಿ ವೆಚ್ಚವಾಗಲಿದ್ದು, ಕೇಂದ್ರದ ಯೂನಿವರ್ಸಲ್ ಸರ್ವೀಸ್ ಆಬ್ಲಿಗೇಷನ್ (USO) ಹಣ ಹೂಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.