ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುನ್ನ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಜೆಡಿಯು ಮತ್ತು ವೈಎಸ್‌ಆರ್‌ಸಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಲ್ಲಿ ತಾನು ವಹಿಸಿರುವ ಪ್ರಮುಖ ಪಾತ್ರದ ಬಗ್ಗೆ ಉಲ್ಲೇಖಿಸಿರುವ ಜೆಡಿಯು, ಬಿಹಾರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಅಥವಾ ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಬಗ್ಗೆ ಈಚೆಗೆ ನಿರ್ಣಯ ಕೈಗೊಂಡಿತ್ತು.
ಇತ್ತ ಆಂಧ್ರಪ್ರದೇಶಕ್ಕೂ ವಿಶೇಷ ಸ್ಥಾನಮಾನ ನೀಡುವಂತೆ ಎನ್‌ಡಿಎ ಮಿತ್ರಪಕ್ಷವಾದ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕರು ಆಗ್ರಹಿಸುತ್ತಿದ್ದಾರೆ.