ಶ್ರೀನಗರ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು (ಗುರುವಾರ) ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀನಗರ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಇಂದು (ಗುರುವಾರ) ಕಾಶ್ಮೀರ ಕಣಿವೆಯ ಗಡಿ ನಿಯಂತ್ರಣ ರೇಖೆಯ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗಡಿ ಭಾಗದಲ್ಲಿ ಒಳನುಸುಳುವಿಕೆ ಹಾಗೂ ಭಯೋತ್ಪಾದನಾ ನಿಗ್ರಹ ಕಾರ್ಯಪಡೆ ಜತೆ ಮಾತುಕತೆ ನಡೆಸಿದರು.
ಭೇಟಿ ವೇಳೆ ಜನರಲ್ ದ್ವಿವೇದಿ ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಜತೆಗೆ ಇದ್ದರು . ಈ ವೇಳೆ ಕುಪ್ವಾರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧ ದಿಲಾವರ್ ಖಾನ್ ಅವರಿಗೆ ಗೌರವ ನಮನ ಸಲ್ಲಿಸಿದರು.
26 ಜುಲೈ 1999ರಂದು ಕಾರ್ಗಿಲ್ ಸಂಘರ್ಷ ಎಂದೂ ಕರೆಯಲ್ಪಡುವ ಕಾರ್ಗಿಲ್ ಯುದ್ಧವು ಅಧಿಕೃತವಾಗಿ ಕೊನೆಗೊಂಡಿತ್ತು. ಪಾಕಿಸ್ತಾನ ನುಸುಳುಕೋರರು ವಶಪಡಿಸಿಕೊಂಡಿದ್ದ ಪರ್ವತ ಶ್ರೇಣಿಗಳನ್ನು ಭಾರತೀಯ ಸೈನಿಕರು ಯಶಸ್ವಿಯಾಗಿ ಮರು ವಶಕ್ಕೆ ಪಡೆದಿದ್ದರು. ಹೀಗಾಗಿ ದೇಶದಾದ್ಯಂತ ಜುಲೈ 26ರಂದು 'ಕಾರ್ಗಿಲ್ ವಿಜಯ ದಿವಸ' ಎಂದು ಆಚರಿಸಲಾಗುವುದು.