HEALTH TIPS

ಮುಂದೂಡಲಾಗಿದ್ದ NEET-PG ಪರೀಕ್ಷೆ ಆಗಸ್ಟ್ 11ಕ್ಕೆ

Top Post Ad

Click to join Samarasasudhi Official Whatsapp Group

Qries

Qries

          ವದೆಹಲಿ: ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್‌ ಪ್ರವೇಶಕ್ಕೆ ಇರುವ ನೀಟ್‌-ಪಿಜಿ ಪರೀಕ್ಷೆಯ ಹೊಸ ದಿನಾಂಕ ಶುಕ್ರವಾರ ಪ್ರಕಟಗೊಂಡಿದೆ.


             ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು ಎಂದು ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿ ತಿಳಿಸಿದೆ.

          ಮೇ 5ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂಬ ಕೂಗು ಕೇಳಿಬಂದಿತ್ತು. ಈ ವಿವಾದದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಜೂನ್ 23 ರಂದು ನಡೆಯಬೇಕಿದ್ದ, ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಮುಂದೂಡಿತ್ತು.

             ಸದ್ಯ ನೀಟ್‌-ಪಿಜಿ ಪರೀಕ್ಷೆ 2024 ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ ಎಂದು ಮಂಡಳಿ ಹೇಳಿದೆ.

Below Post Ad


ಜಾಹಿರಾತು














ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries