ಜೈಪುರ: ನೀಟ್- ಯುಜಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಇಲ್ಲಿನ ಗಾಂಧಿನಗರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಜೈಪುರ: ನೀಟ್- ಯುಜಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಇಲ್ಲಿನ ಗಾಂಧಿನಗರ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
'ರೈಲ್ ರೋಕೋ' ಅಭಿಯಾನದ ಅಡಿಯಲ್ಲಿ ರಾಜಸ್ಥಾನದ ಇತರ ನಗರಗಳಲ್ಲಿಯೂ ಪ್ರತಿಭಟನೆ ನಡೆಸಲಾಯಿತು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಅಭಿಮನ್ಯು ಪೂನಿಯಾ ಜೈಪುರದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಗಾಂಧಿನಗರ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ ) ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದರು. ಜತೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
'ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿಯೂ ಕೇಂದ್ರ ಉತ್ತರ ನೀಡಬೇಕಿದೆ' ಎಂದು ಪೂನಿಯಾ ಹೇಳಿದರು.