ನೀಟ್ ಅಕ್ರಮಕ್ಕೆ ಸಂಬಂಧಿಸಿದ ತಮ್ಮ ಬೇಡಿಕೆಗಳನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸುವುದಾಗಿ ತಿಳಿಸಿದ ಜೈರಾಮ್ ರಮೇಶ್, ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಮಸ್ಯೆ ಕೇವಲ ನೀಟ್‌ಗೆ ಸಂಬಂಧಿಸಿದ್ದಲ್ಲ. ಆದರೆ ಶಿಕ್ಷಣ ಸಚಿವಾಲಯ ನಡೆಸುವ ಎಲ್ಲಾ ಸಂಸ್ಥೆಗಳಿಗೆ ಸಂಬಂಧಿಸಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಈ ಎನ್‌ಟಿಎ(ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಏನು ಮಾಡುತ್ತದೆ ಎಂಬುದರ ಕುರಿತು ನಾವು ಸದನದ ಮುಂದಿಡುತ್ತೇವೆ. ಇದು ಖಾಸಗಿ ಕಂಪನಿಗಳ ಮೂಲಕ ಎಲ್ಲಾ ಪರೀಕ್ಷೆಗಳನ್ನು ನಡೆಸುತ್ತದೆ.