ನವದೆಹಲಿ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿರುವುದರ ಮಧ್ಯೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಕೀವ್‌ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ನವದೆಹಲಿ: ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಜಾಗತಿಕ ಮಟ್ಟದಲ್ಲಿ ಪ್ರಯತ್ನಗಳು ನಡೆಯುತ್ತಿರುವುದರ ಮಧ್ಯೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಕೀವ್‌ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಉಕ್ರೇನ್ ರಾಷ್ಟ್ರೀಯ ದಿನದ ಅಂಗವಾಗಿ ಆಗಸ್ಟ್ 24ರಂದು ಕೀವ್‌ಗೆ ಭೇಟಿ ನೀಡಲಿದ್ದಾರೆ.
ಮೋದಿ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಕಳೆದ ತಿಂಗಳು ಇಟಲಿಯಲ್ಲಿ ನಡೆದ ಜಿ7 ಶೃಂಗದ ವೇಳೆ ಮಾತುಕತೆ ನಡೆಸಿದ್ದರು.
ಮೋದಿ ಅವರು ಕೀವ್‌ಗೆ ಭೇಟಿ ನೀಡುವುದನ್ನು ಭಾರತ ಮತ್ತು ಉಕ್ರೇನ್ ಎದುರು ನೋಡುತ್ತಿವೆ. ಆದರೆ, ಭೇಟಿಗೆ ಸಂಬಂಧಿಸಿದಂತೆ ಭಾರಿ ಸಿದ್ಧತೆಗಳನ್ನು ಕೈಗೊಳ್ಳಬೇಕಿರುವುದರಿಂದ ಈ ವಿಚಾರ ಇನ್ನೂ ಅಂತಿಮವಾಗಿಲ್ಲ ಎಂದು ಮೂಲಗಳು ಹೇಳಿವೆ.
ಮೋದಿ ಅವರ ದ್ವಿರಾಷ್ಟ್ರ ಪ್ರವಾಸವು ಆಗಸ್ಟ್ 23-24ರಂದು ಆರಂಭವಾಗಲಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಭಾರತ ಅಥವಾ ಉಕ್ರೇನ್ ಅಧಿಕೃತ ಹೇಳಿಕೆ ನೀಡಿಲ್ಲ.