ಆಲಪ್ಪುಳ : ರಾಜ್ಯದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮೀನುಗಾರಿಕಾ ಸಚಿವ ಸಾಜಿ ಚೆರಿಯನ್ ಟೀಕಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅನೇಕ ವಿದ್ಯಾರ್ಥಿಗಳು ಸರಿಯಾಗಿ ಬರೆಯುವ ಮತ್ತು ಓದುವ ಕೌಶಲ್ಯಗಳನ್ನೇ ಹೊಂದಿಲ್ಲ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ಈ ಹಿಂದೆ ಕನಿಷ್ಠ 210 ಅಂಕಗಳನ್ನು ಗಳಿಸುವುದು ಕಷ್ಟಕರವಾಗಿತ್ತು. ಆದರೆ ಈಗ ಎಲ್ಲರೂ ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತಿದ್ದಾರೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಅವರಲ್ಲಿ ಶೇಕಡಾವಾರು ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಹಾಗೂ ಬರೆಯಲು ತಿಳಿದಿಲ್ಲ' ಎಂದು ಹೇಳಿದ್ದಾರೆ.
'ಪರೀಕ್ಷೆಯಲ್ಲಿ ಯಾರಾದರೊಬ್ಬರು ಅನುತ್ತೀರ್ಣರಾದರೆ ಅದನ್ನು ಸರ್ಕಾರದ ವೈಫಲ್ಯ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉದಾರವಾಗಿ ಅಂಕಗಳನ್ನು ನೀಡುವುದು ಒಳಿತು' ಎಂದು ಅವರು ಹೇಳಿದ್ದಾರೆ.
ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು, ಇದರಲ್ಲಿ ಬದಲಾವಣೆ ತರುವ ನಿರೀಕ್ಷೆಯಿದೆ ಎಂದು ಚೆರಿಯನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ (ಕೇರಳ) ಕಳೆದ ತಿಂಗಳು 2023-24ನೇ ಸಾಲಿನ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿತ್ತು. ಒಟ್ಟು 4,25,563 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಶೇ 99.69ರಷ್ಟು ಫಲಿತಾಂಶ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.