HEALTH TIPS

Union Budget 2024: ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ನಿರ್ಮಲಾ ಸೀತಾರಾಮನ್‌

 ವದೆಹಲಿ: ಲೋಕಸಭಾ ಅಧಿವೇಶನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಂಕಿ ಅಂಶಗಳೊಂದಿಗೆ ಆರ್ಥಿಕ ಸಮೀಕ್ಷೆ ವರದಿ 2023-24 ಅನ್ನು ಮಂಡಿಸಿದರು.

ಆರ್ಥಿಕ ಸಮೀಕ್ಷೆಯು ದೇಶದ ಆರ್ಥಿಕತೆಯ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬಜೆಟ್‌ಗೆ ಮುಂಚಿತವಾಗಿ ಸರ್ಕಾರವು ಪ್ರಸ್ತುತಪಡಿಸುವ ವಾರ್ಷಿಕ ದಾಖಲೆಯಾಗಿದೆ.

ದೇಶದ ಆರ್ಥಿಕತೆಯ ಅಲ್ಪಾವಧಿ ಮತ್ತು ಮಧ್ಯಮ ಅವಧಿಯ ನಿರೀಕ್ಷೆಗಳ ಅವಲೋಕನವನ್ನು ಸಹ ಇದು ಒದಗಿಸುತ್ತದೆ.

ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗದಿಂದ ಈ ವರದಿಯನ್ನು ಸಿದ್ಧಪಡಿಸಲಾಗುತ್ತದೆ.

ಆಯವ್ಯಯದ ದಾಖಲೆಯೊಂದಿಗೆ 1950-51ರಲ್ಲಿ ಮೊದಲ ಬಾರಿಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆ ಜಾರಿಗೆ ಬಂದಿತು.

1960ರಲ್ಲಿ ಅದನ್ನು ಕೇಂದ್ರ ಬಜೆಟ್‌ನಿಂದ ಬೇರ್ಪಡಿಸಿ ಬಜೆಟ್‌ ಮಂಡನೆಯ ಹಿಂದಿನ ದಿನ ಮಂಡನೆಯಾಗುವಂತೆ ನೀತಿ ರೂಪಿಸಲಾಯಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries