ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವುದು 'ತಾರತಮ್ಯದ ಬಜೆಟ್' ಎಂದು 'ಇಂಡಿಯಾ' ಬಣದ ಸಂಸದರು ದೂರಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿರುವುದು 'ತಾರತಮ್ಯದ ಬಜೆಟ್' ಎಂದು 'ಇಂಡಿಯಾ' ಬಣದ ಸಂಸದರು ದೂರಿದ್ದಾರೆ.
ಬಜೆಟ್‌ನಲ್ಲಿ ರಾಜ್ಯಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳ ಘೋಷಣೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದೆ ಎಂದು 'ಇಂಡಿಯಾ' ಬಣದ ನಾಯಕರು ಆಕ್ರೋಶ ಹೊರಹಾಕಿದ್ದು, ನಾಳೆ (ಬುಧವಾರ) ಸಂಸತ್‌ನಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ದೆಹಲಿಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ 'ಇಂಡಿಯಾ' ಬಣದ ನಾಯಕರು ಸಭೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚಿಸಲು ಮುಖ್ಯ ಪಾತ್ರವಹಿಸಿರುವ ಜೆಡಿಯು ಮತ್ತು ಟಿಡಿಪಿ ನಾಯಕರು ಕ್ರಮವಾಗಿ ಬಿಹಾರ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದರು. ಆದರೆ, ಎರಡೂ ರಾಜ್ಯಗಳಿಗೂ ವಿಶೇಷ ಸ್ಥಾನಮಾನ ನೀಡದಿದ್ದರೂ ಭರಪೂರ ಅನುದಾನ ಮತ್ತು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ.