ಜಲೌನ್: ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಜಲೌನ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಅವಸ್ಥಿ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜಲೌನ್: ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಜಲೌನ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಭಾಸ್ಕರ್ ಅವಸ್ಥಿ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಅವಸ್ಥಿ ಅವರ ಸ್ಥಿತಿ ಗಂಭೀರವಾಗಿದ್ದು, ಕಾನ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸ್ಕೂಟರ್‌ನಲ್ಲಿ ಪತ್ನಿಯೊಂದಿಗೆ ಮನೆಗೆ ತೆರಳುತ್ತಿದ್ದ ಅವಸ್ಥಿ ಅವರ ಮೇಲೆ ಅಪರಿಚಿತರು ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಭುಜಕ್ಕೆ ಗಾಯವಾಗಿದೆ. ಕೂಡಲೇ ಅವರನ್ನು ಒರಾಯ್ ಪಟ್ಟಣದಲ್ಲಿರುವ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಐರಾಜ್ ರಾಜಾ ತಿಳಿಸಿದ್ದಾರೆ.
ಅವಸ್ಥಿ ಅವರ ಕುಟುಂಬದವರು ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.