ನವದೆಹಲಿ: ಭಾರತಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ ಬಾಂಗ್ಲಾದೇಶದ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಬಿಎಸ್‌ಎಫ್ ಭಾನುವಾರ ತಿಳಿಸಿದೆ.
ನವದೆಹಲಿ: ಭಾರತಕ್ಕೆ ಅಕ್ರಮವಾಗಿ ನುಸುಳಲು ಯತ್ನಿಸಿದ ಬಾಂಗ್ಲಾದೇಶದ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಬಿಎಸ್‌ಎಫ್ ಭಾನುವಾರ ತಿಳಿಸಿದೆ.
ಪಶ್ಚಿಮ ಬಂಗಾಳ, ತ್ರಿಪುರ ಮತ್ತು ಮೇಘಾಲಯದ ಅಂತರರಾಷ್ಟ್ರೀಯ ಗಡಿ ಮೂಲಕ ಇವರು ಭಾರತದ ಒಳಗೆ ನುಸುಳಲು ಯತ್ನಿಸಿದ್ದರು.
ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳಲ್ಲಿ ತಲಾ ಇಬ್ಬರು ಹಾಗೂ ಮೇಘಾಲಯದಲ್ಲಿ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ವಿಚಾರಣೆ ನಡೆಸಿದ ಬಳಿಕ ಆಯಾ ರಾಜ್ಯಗಳ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರರು ಮಾಹಿತಿ ನೀಡಿದ್ದಾರೆ.
ಉಭಯ ದೇಶಗಳಿಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯೊಂದಿಗೆ(ಬಿಜಿಬಿ) ಬಿಎಸ್‌ಎಫ್ ನಿರಂತರ ಸಂಪರ್ಕದಲ್ಲಿದೆ. ಮುಖ್ಯವಾಗಿ ಬಾಂಗ್ಲಾದೇಶದಲ್ಲಿ ಭಾರತೀಯರು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ನಿಯಂತ್ರಿಸುವ ಕುರಿತು ಸಹ 'ಬಿಜಿಬಿ' ಜತೆ ಚರ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.