HEALTH TIPS

ರಾಜ್ಯದಲ್ಲಿ ಬಿರುಸುಗೊಳ್ಳಲಿರುವ ಮಳೆ: 12 ಜಿಲ್ಲೆಗಳಿಗೆ ಎಚ್ಚರಿಕೆ

              ತಿರುವನಂತಪುರಂ: ರಾಜ್ಯದಲ್ಲಿ ಮಳೆ ಮತ್ತೆ ಬಿರುಸುಗೊಳ್ಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪರಿಷ್ಕøತ ಮುನ್ನೆಚ್ಚರಿಕೆಯ ಪ್ರಕಾರ 12 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.

            ಮುಂದಿನ ದಿನಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ಇದೆ. ಈ ಮಧ್ಯೆ, ಪತ್ತನಂತಿಟ್ಟ ಮತ್ತು ಇಡುಕ್ಕಿಯಲ್ಲಿ ಆರೆಂಜ್ ಅಲರ್ಟ್ ಮುಂದುವರಿದಿದೆ. ಕಾಸರಗೋಡು ಮತ್ತು ಆಲಪ್ಪುಳ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಭಾರೀ ಮಳೆಯಾಗುವ ಪ್ರದೇಶಗಳಲ್ಲಿ ಭೂಕುಸಿತ ಮತ್ತು ಪ್ರವಾಹದ ಬಗ್ಗೆ ಜನರು ಎಚ್ಚರದಿಂದಿರಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ.

             ಆಲಪ್ಪುಳ ಮತ್ತು ಕಾಸರಗೋಡು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಸ್ಥಳಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries