HEALTH TIPS

12ಕ್ಕೆ ಮಾನವ-ಆನೆ ಸಂಘರ್ಷ ಅಂತಾರಾಷ್ಟ್ರೀಯ ಸಮ್ಮೇಳನ

 ಬೆಂಗಳೂರುವಿಶ್ವ ಆನೆ ದಿನಾಚರಣೆ ಸಲುವಾಗಿ ಈ ಬಾರಿ ಮಾನವ-ಆನೆ ಸಂಘರ್ಷ ಕುರಿತಾಗಿ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆ.12ರಂದು ಬೆಂಗಳೂರು ಕೃಷಿ ವಿವಿಯ ಜಿಕೆವಿಕೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಮೆರಿಕ, ಜರ್ಮನಿ, ಜಪಾನ್, ಇಂಗ್ಲೆಂಡ್ ಸೇರಿ 11 ರಾಷ್ಟ್ರಗಳ 17ಕ್ಕೂ ಹೆಚ್ಚು ಹಾಗೂ ದೇಶದ 26 ರಾಜ್ಯಗಳ 660 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಕರ್ನಾಟಕ ರಾಜ್ಯದಲ್ಲಿ 6395 ಆನೆಗಳಿದ್ದು, ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. 563 ಹುಲಿಗಳಿದ್ದು, ರಾಜ್ಯ 2ನೇ ಸ್ಥಾನದಲ್ಲಿದೆ. ಇದಕ್ಕೆ ಅನುಗುಣವಾಗಿ ಅರಣ್ಯ ಪ್ರದೇಶವಿಲ್ಲದ ಕಾರಣ ಆನೆಗಳು ನಾಡಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಆನೆ ಮತ್ತು ಮಾನವ ಸಂಘರ್ಷ ತಗ್ಗಿಸಲು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದರು. ದೇಶದಲ್ಲಿ 2009ರಿಂದ 2023ರ ನಡುವೆ ಒಟ್ಟಾರೆ ಸುಮಾರು 1381 ಆನೆಗಳು ಅಸಹಜ ಸಾವು ಕಂಡಿವೆ. ಕಳೆದ ಮೂರು ವರ್ಷದಲ್ಲಿ ಸುಮಾರು 283 ಆನೆಗಳು ಮೃತಪಟ್ಟಿವೆ. ಆನೆಗಳ ದಾಳಿ ತಪ್ಪಿಸಲು ಕಾರ್ಯಪಡೆ ರಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಹೆಚ್ಚುವರಿಯಾಗಿ ಎರಡು ಆನೆ ಕಾರ್ಯಪಡೆ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ರಾಮನಗರ, ಬನ್ನೇರುಘಟ್ಟ, ಬಂಡೀಪುರ ಸೇರಿ 8 ಜಿಲ್ಲೆಗಳಲ್ಲಿ ಕಾರ್ಯಪಡೆಗಳಿದ್ದು, ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.

10 ಸಾವಿರ ಎಕರೆ ತೆರವು: ರಾಜ್ಯದಲ್ಲಿ 6 ಲಕ್ಷ ಎಕರೆಯಲ್ಲಿ ಸುಮಾರು 2 ಲಕ್ಷ ಎಕರೆ ಒತ್ತುವರಿ ಇರಬಹುದು ಎಂದು ಅಂದಾಜಿಸಲಾಗಿದೆ. ಅನಧಿಕೃತವಾಗಿ 10 ಸಾವಿರ ಎಕರೆ, ಅಧಿಕೃತವಾಗಿ 3 ಸಾವಿರ ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಕೊತ್ತನೂರು ಬಳಿ 500 ಕೋಟಿ ರೂ. ಮೌಲ್ಯದ 17 ಎಕರೆ ತೆರವಾಗಿದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಸಂಜಯ್ ಕುಮಾರ್ ಸಮಿತಿ

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಕುರಿತಂತೆ 1533 ಗ್ರಾಮಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ನಿವಾಸಿ ಗಳೊಂದಿಗೆ ರ್ಚಚಿಸಿ, ಸಾಧಕ ಬಾಧಕ ಅರಿತು ವರದಿ ನೀಡಲು ನಿವೃತ್ತ ಐಎಫ್​ಎಸ್ ಅಧಿಕಾರಿ ಸಂಜಯ್ ಕುಮಾರ್ ಸಮಿತಿ ರಚಿಸಿತ್ತು. ಆ ಸಮಿತಿ ಸದಸ್ಯರು ತಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದರು. ಆದರೆ ಯಾವುದೇ ಗ್ರಾಮಕ್ಕೆ ಭೇಟಿ ನೀಡಲಿಲ್ಲ. ಜನರೊಂದಿಗೆ ಮಾತುಕತೆ ನಡೆಸಲಿಲ್ಲ ಎಂದು ದೂರಿದರು.

ಕಸ್ತೂರಿ ರಂಗನ್ ವರದಿ ತಿರಸ್ಕಾರ

ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ತಿರಸ್ಕರಿಸುವ ತೀರ್ಮಾನ ಕೈಗೊಂಡಿದೆ. ಕೇಂದ್ರ ಮತ್ತೊಂದು ಅಧಿಸೂಚನೆ ಹೊರಡಿಸಿ ರಾಜ್ಯದ 20,668 ಚದರ ಕಿಲೋ ಮೀಟರ್​ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಳಗಾವಿಯ 33 (ತಾಲೂಕು ಮರು ವಿಂಗಡಣೆಯ ನಂತರ 39) ತಾಲೂಕುಗಳ 1533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದರು.

ಮುಲಾಜಿಲ್ಲದೆ ಹೋಂಸ್ಟೇ ತೆರವು

ಕೇರಳ ದುರಂತ, ಶಿರೂರು ಮತ್ತು ಶಿರಾಡಿಯಲ್ಲಿನ ಭೂ ಕುಸಿತ ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಅರಣ್ಯ ಪ್ರದೇಶಗಳಲ್ಲಿ ಹೋಂಸ್ಟೇ ಮಾಡಿ ದ್ದರೆ ಮುಲಾಜಿಲ್ಲದೆ ತೆರವು ಮಾಡಲಾಗುವುದು. ಅದೇ ರೀತಿ ಅರಣ್ಯ ಹಕ್ಕು ಕಾಯ್ದೆ ಅಡಿ ಈಗಾಗಲೆ ಅರ್ಜಿ ಸಲ್ಲಿಸಿರು ವವರ ಯಾವುದೇ ಮನೆ, ಜಮೀನು ತೆರವು ಮಾಡುವುದಿಲ್ಲ. 2015ರ ನಂತರದ ಹೊಸ ಒತ್ತುವರಿ ವಿಚಾರದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಖಂಡ್ರೆ ಹೇಳಿದರು.

ಆನೆ ಕಾರಿಡಾರ್ ಯೋಜನೆ

ಆನೆಗಳ ಕಾರಿಡಾರ್ ಮಾಡಬೇಕೆನ್ನುವ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಬಂದಿದೆ. ಸಕಲೇಶಪುರ ಮತ್ತಿತರ ಭಾಗದಲ್ಲಿ ಕಾರಿಡಾರ್​ಗೆ ತಮ್ಮದೇ ಜಮೀನು ಬಿಟ್ಟುಕೊಡಲು ರೈತರು ಮುಂದೆ ಬಂದಿದ್ದಾರೆ. ಈ ಬಗ್ಗೆ ಹೆಚ್ಚಿನ ಅನುದಾನ ಅಗತ್ಯವಿದ್ದು, ಮುಖ್ಯಮಂತ್ರಿಗಳ ಜೊತೆಗೆ ರ್ಚಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries