ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆ.14ರಂದು ಸಂದರ್ಶನ ನಡೆಯಲಿದೆ. ಜನರಲ್ ಮೆಡಿಸಿನ್, ಪೀಡಿಯಾಟ್ರಿಕ್ಸ್, ಡರ್ಮಟಾಲಜಿ ಮತ್ತು ವೆನೆರಿಯಾಲಜಿ, ಕಮ್ಯುನಿಟಿ ಮೆಡಿಸಿನ್, ಪಲ್ಮನರಿ ಮೆಡಿಸಿನ್, ರೇಡಿಯೊ ಡಯಾಗ್ನೋಸಿಸ್, ಓರಲ್ ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗಗಳಲ್ಲಿ ಖಾಲಿ ಇರುವ ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಸಂಬಂಧಿತ ವಿಷಯಗಳಲ್ಲಿ ಎಂಡಿ, ಡಿಎನ್ ಬಿ ಅರ್ಹತೆ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಅಭ್ಯರ್ಥಿಗಳನ್ನು ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು. ಅರ್ಹ, ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ, ಕೆಲಸದ ಅನುಭವ ಸಾಬೀತುಪಡಿಸುವ ಅಗತ್ಯ ಪ್ರಮಾಣಪತ್ರಗಳು ಮತ್ತು ಪ್ರತಿಗಳೊಂದಿಗೆ ಆ.14ರಂದು ಬೆಳಗ್ಗೆ 11ಕ್ಕೆ ಕಾಸರಗೋಡು ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚಿನ ಯೋಗ್ಯತೆ ಮತ್ತು ಹೆಚ್ಚು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
………………………………………………………………………………………………………………………………………………
16ರಂದು ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸಂದರ್ಶನ
ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸÀರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲು ಆ.16ರಂದು ಬೆಳಗ್ಗೆ 11ಕ್ಕೆ ಸಂದರ್ಶನ ನಡೆಯಲಿದೆ. ಎಂಬಿಬಿಎಸ್ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಕಾಸರಗೋಡು ಮೆಡಿಕಲ್ ಕಾಲೇಜು ಪ್ರಾಂಶುಪಾಲ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚು ಯೋಗ್ಯತೆ ಮತ್ತು ಹೆಚ್ಚು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.