ಪ್ರಸ್ತುತ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ನೋಡಿ "ತುಂಬಾ ನೋವಾಗುತ್ತಿದೆ" ಮತ್ತು ಇಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಇದು ಚಂದ್ರಶೇಖರ್ ಬರೆದಿರುವ ಪತ್ರ ಎಂದು ಅವರ ಪರ ವಕೀಲ ಅನಂತ್ ಮಲಿಕ್ ಅವರು ಖಚಿತಪಡಿಸಿದ್ದು, "ಇಂದು ನನ್ನ ಪ್ರತಿಷ್ಠಾನದಿಂದ ಪರಿಹಾರ ನಿಧಿಗೆ 15 ಕೋಟಿ ರೂಪಾಯಿ ದೇಣಿಗೆ ಸ್ವೀಕರಿಸಲು ನಾನು ಈ ಮೂಲಕ ವಿನಂತಿಸುತ್ತಿದ್ದೇನೆ. ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯ ಮೂಲಕ ಹಣ ನೀಡುತ್ತೇನೆ. ಈ ಕೊಡುಗೆಯನ್ನು ಹೊರತುಪಡಿಸಿ, ನಾನು ಸಂತ್ರಸ್ತರಿಗೆ ತಕ್ಷಣವೇ 300 ಮನೆಗಳನ್ನು ನಿರ್ಮಿಸಲು ಹೆಚ್ಚಿನ ಕೊಡುಗೆ ನೀಡಲು ಸಿದ್ಧ" ಎಂದು ಪತ್ರದಲ್ಲಿ ತಿಳಿಸಲಾಗಿದೆ
"ಕಾನೂನುಬದ್ಧ ವ್ಯವಹಾರ ಖಾತೆಗಳಿಂದ" ಈ ಹಣವನ್ನು ನೀಡುವುದಾಗಿ ತಿಳಿಸಿರುವ ಸುಕೇಶ್ ಚಂದ್ರಶೇಖರ್, ರಾಜ್ಯ ಸರ್ಕಾರವು ಈ ಪ್ರಸ್ತಾಪವನ್ನು ಸ್ವೀಕರಿಸಬೇಕು ಮತ್ತು ಭೂಕುಸಿತ ದುರಂತಲ್ಲಿ ಸಂತ್ರಸ್ತರ ಕಲ್ಯಾಣ ಮತ್ತು ಪುನರ್ವಸತಿಗಾಗಿ ಈ ಹಣವನ್ನು ಬಳಸಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ.
ಸುಕೇಶ್ ಚಂದ್ರಶೇಖರ್ ಅವರ ಈ ಪತ್ರಕ್ಕೆ ಕೇರಳ ಸರ್ಕಾರ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.