ಪೆರ್ಲ: ಉಕ್ಕಿನಡ್ಕದ ಕಾಸರಗೋಡು ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಜೂನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಗರಿಷ್ಠ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲು ಆ.16ರಂದು ಬೆಳಗ್ಗೆ 11ಕ್ಕೆ ಸಂದರ್ಶನ ನಡೆಯಲಿದೆ. ಎಂಬಿಬಿಎಸ್ ಮತ್ತು ಟಿಸಿಎಂಸಿ ನೋಂದಣಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಕಾಸರಗೋಡು ಮೆಡಿಕಲ್ ಕಾಲೇಜು ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವಂತೆ ತಿಳಿಸಲಾಗಿದೆ. ಹೆಚ್ಚು ಯೋಗ್ಯತೆ ಮತ್ತು ಹೆಚ್ಚು ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.