ನವದೆಹಲಿ: 'ಯಾವ ದೇಶವು ತನ್ನ ಇತಿಹಾಸವನ್ನು ನೆನಪಿಸಿಕೊಳ್ಳುತ್ತದೆಯೋ ಆ ರಾಷ್ಟ್ರವು ಅತ್ಯಂತ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತದೆ ಮತ್ತು ಭವಿಷ್ಯವೂ ಉತ್ತಮವಾಗಿರುತ್ತದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
ನವದೆಹಲಿ: 'ಯಾವ ದೇಶವು ತನ್ನ ಇತಿಹಾಸವನ್ನು ನೆನಪಿಸಿಕೊಳ್ಳುತ್ತದೆಯೋ ಆ ರಾಷ್ಟ್ರವು ಅತ್ಯಂತ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತದೆ ಮತ್ತು ಭವಿಷ್ಯವೂ ಉತ್ತಮವಾಗಿರುತ್ತದೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.
1947ರ ದೇಶ ವಿಭಜನೆಯ ವರ್ಷಾಚರಣೆಯ ಸಂದರ್ಭದಲ್ಲಿ ಮೃತಪಟ್ಟವರಿಗೆ ಅಮಿತ್ ಶಾ ಶ್ರದ್ಧಾಂಜಲಿ ಸಲ್ಲಿಸಿದರು.
ವಿಭಜನೆಯ ಸಂದರ್ಭದಲ್ಲಿ ನಡೆದ ಗಲಭೆಗಳಲ್ಲಿ ಲಕ್ಷಾಂತರ ಜನರು ಸ್ಥಳಾಂತರಗೊಂಡರು ಮತ್ತು ಸಾಕಷ್ಟು ಪ್ರಮಾಣದಲ್ಲಿ ಸಾವು- ನೋವು ಸಂಭವಿಸಿತ್ತು.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, 'ಇತಿಹಾಸದ ಈ ಕರಾಳ ದಿನದಂದು ನೂರಾರು ನೆನಪುಗಳು ನಮ್ಮನ್ನು ಕಾಡುತ್ತವೆ. ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರು ಹಾಗೂ ನಿರಾಶ್ರಿತರಾದ ಲಕ್ಷಾಂತರ ಜನರಿಗೆ ನನ್ನ ನಮನಗಳು. ಇತಿಹಾಸವನ್ನು ನನೆನಪಿಸಿಕೊಳ್ಳುವ ದೇಶವು ಅತ್ಯಂತ ಶಕ್ತಿಶಾಲಿಯಾಗಿ ಹೊರಹೊಮ್ಮುತ್ತದೆ' ಎಂದು ತಿಳಿಸಿದ್ಧಾರೆ.
ದೇಶ ವಿಭಜನೆ ಸಮಯದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಆಗಸ್ಟ್ 14ರಂದು ' ದೇಶ ವಿಭಜನೆಯ ಕರಾಳ ದಿನವೆಂದು' ಆಚರಿಸಲಾಗುವುದು.