ಬದಿಯಡ್ಕ: ಎಡನೀರು ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರ ಚತುರ್ಥ ವಾರ್ಷಿಕ ಆರಾಧನಾ ಮಹೋತ್ಸವ ಆಗಸ್ಟ್ 23ರಂದು ಶ್ರೀಮಠದಲ್ಲಿ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಾರ್ಯಕ್ರಮ ಜರಗಲಿದೆ.
ಅಂದು ಬೆಳಗ್ಗೆ 8.30ಕ್ಕೆ ಧ್ವಜಾರೋಹಣ, 8.30ಕ್ಕೆ ಭಜನೆ, 10ಕ್ಕೆ ಯಜ್ಞೇಶ ಆಚಾರ್ಯ ಸುಬ್ರಹ್ಮಣ್ಯ ಮತ್ತು ಬಳಗದವರಿಂದ ಭಕ್ತಿಸಂಗೀತ ಕಾರ್ಯಕ್ರಮ, ಮಧ್ಯಾಹ್ನ 12.15ಕ್ಕೆ ವೃಂದಾವನ ಪೂಜೆ, ನಡೆಯುವುದು. 2.15ಕ್ಕೆ ಆರಾಧನೋತ್ಸವ ಮಹಾಸಭೆಯಲ್ಲಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಧರ್ಮದರ್ಶಿ ಭೀಮೇಶ್ವರ ಜೋಷಿ ಅದ್ಯಕ್ಷತೆ ವಹಿಸುವರು. ಬೆಂಗಳೂರಿನ ಖ್ಯಾತ ಜ್ಯೋತಿಷಿ ಬಿ.ಎಸ್ ದ್ವಾರಕಾನಾಥ್ ಅವರು ಗುರುಸ್ಮರಣೆ ಮತ್ತು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಸ್ಮøತಿ ಗೌರವ ಪ್ರದಾನ ಮಾಡುವರು. ಕರ್ನಾಟಕಮಾನವ ಹಕ್ಕು ಆಯೋಗ ಅಧ್ಯಕ್ಷ ಡಾ. ಟಿ.ಶ್ಯಾಮ ಭಟ್ ಗೌರವ ಉಪಸ್ಥಿತರಿರುವರು. ಶ್ರೀಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಅಭಿನಂದನಾ ಭಾಷಣ ಮಾಡುವರು.
ಸಂಜೆ 4ರಿಂದ ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ಪ್ರಸಿದ್ಧ ಕಲಾವಿರ ಕೂಡುವಿಕೆಯೊಂದಿಗೆ 'ಬೇಡರ ಕಣ್ಣಪ್ಪ-ರಾಜ್ಯತ್ಯಾಗ ವೈಜಯತೀ ಪರಿಣಭಯ-ನರಕಾಸುರ ಮೋಕ್ಷ' ಯಕ್ಷಗಾನ ಬಯಲಾಟ ಜರಗಲಿರುವುದು.