ಮಂಜೇಶ್ವರ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿμÁ್ಠನ ಕಾಸರಗೋಡು ಸಂಸ್ಥೆಯ ಸಹಯೋಗದೊಂದಿಗೆ ಆ. 24 ಹಾಗೂ 25ರಂದು ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ಎರಡುದಿನಗಳ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ ಹಾಗೂ ಯಕ್ಷಗಾನ ಪ್ರದರ್ಶನ ಜರಗಲಿದೆ.
ಆ. 24ರಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಶಿಬಿರ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ವಹಿಸಲಿದ್ದು, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ದೀಪ ಪ್ರಜ್ವಲನೆಗೈಯ್ಯುವರು. ಮುಖ್ಯ ಅತಿಥಿಗಳಾಗಿ ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಕರ್ಗಲ್ಲು ವಿಶ್ವೇಶ್ವರ ಭಟ್ ಭಾಗವಹಿಸುವರು. ಬೆಳಿಗ್ಗೆ 11.30ರಿಂದ ತೆಂಕುತಿಟ್ಟು ಯಕ್ಷಗಾನದ ಹಿರಿಯ ನಾಟ್ಯ ಗುರು ಕರ್ಗಲ್ಲು ವಿಶ್ವೇಶ್ವರ ಭಟ್ ಅವರಿಂದ ಶಾಸ್ತ್ರೀಯ ನಾಟ್ಯ ಪ್ರಾತ್ಯಕ್ಷಿಕೆ, ಪ್ರಸ್ತುತಿ, ಪ್ರದರ್ಶನ, ಸಂವಾದ ಜರಗಲಿದೆ.
ಅಪರಾಹ್ನ 2. ರಿಂದ ತೆಂಕುತಿಟ್ಟು ಯಕ್ಷಗಾನ ನಾಟ್ಯದ ಪ್ರಾಥಮಿಕ ಹಂತದ ದಾಖಲೀಕರಣ, ಪ್ರಸಾರ, ಪ್ರಸ್ತುತಿ, ಪ್ರಾತ್ಯಕ್ಷಿಕೆ ಜರಗಲಿದ್ದು ಸಂಪನ್ಮೂಲ ವ್ಯಕ್ತಿಗಳಾಗಿ ತೆಂಕುತಿಟ್ಟಿನ ಅನುಭವಿ ಕಲಾವಿದರುಗಳಾದ ರವಿಶಂಕರ ವಳಕ್ಕುಂಜ, ಲಕ್ಷ್ಮಣ ಕುಮಾರ್ ಮರಕಡ, ಡಾ. ಶ್ರುತ ಕೀರ್ತಿರಾಜ್ ಉಜಿರೆ, ಗಣೇಶ ಪಾಲೆಚ್ಚಾರು, ಶ್ರೀಕೃಷ್ಣ ಭಟ್ ದೇವಕಾನ, ರಾಮಮೂರ್ತಿ ಕುದ್ರೆಕ್ಕೋಡ್ಲು, ಗಣೇಶ ಭಟ್ ಬೆಳಾಲು, ರವಿ ಮುಂಡಾಜೆ, ರಂಜಿತ್ ಗೋಳಿಯಡ್ಕ, ರಾಮಕೃಷ್ಣ ಮಯ್ಯ ಸಿರಿಬಾಗಿಲು, ವಸಂತ ಗೌಡ ಕಾಯರ್ತಡ್ಕ ಭಾಗವಹಿಸಲಿದ್ದಾರೆ.
ಆ. 25ರಂದು ಬೆಳಿಗ್ಗೆ 10.30ರಿಂದ ಶಿಬಿರಾರ್ಥಿಗಳಿಗೆ ಅಭ್ಯಾಸ ಶಿಬಿರ ಜರಗಲಿದ್ದು ಮಧ್ಯಾಹ್ನ 1. ರಿಂದ ಯಕ್ಷಬಳಗ ಹೊಸಂಗಡಿ ಮಂಜೇಶ್ವರ ತಂಡದಿಂದ ವಾದ- ಸಂವಾದ- ತಾಳಮದ್ದಳೆ ನಡೆಯಲಿದೆ.
ಅಪರಾಹ್ನ 3.ರಿಂದ ಸಮಾರೋಪ ಸಮಾರಂಭ ಜರಗಲಿದ್ದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಹಾಗೂ ಕಾಸರಗೋಡು ಬೊಂಬೆಯಾಟ ಬಳಗದ ಸಂಚಾಲಕ ಕೆ.ವಿ. ರಮೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 5.ರಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿμÁ್ಠನ ಕಾಸರಗೋಡು ಇವರಿಂದ “ಭಕ್ತ ಪ್ರಹ್ಲಾದ” ಯಕ್ಷಗಾನ ಪ್ರದರ್ಶನ ಜರಗಲಿದೆ.