ಬದಿಯಡ್ಕ: ಏತಡ್ಕ ಸಮೀಪದ ಜೈಗುರುದೇವ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ಅಜ್ಜಿಮೂಲೆಯ ವತಿಯಿಂದ 34ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು. ಜಯ ಕುಮಾರಿ ಎಸ್ ಭಟ್ ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು. ಬಳಿಕ ಶ್ರೀದುರ್ಗಾಪರಮೇಶ್ವರಿ ಭಜನಾ ಸಂಘದವರಿಂದ ಭಜನಾ ಸೇವೆ ಜರಗಿತು. ಈ ಸಂದರ್ಭದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.ಸಾಂಸ್ಕøತಿಕ ಕಾರ್ಯಕ್ರಮದಂಗವಾಗಿ ವಿಠಲ ನಾಯಕ್ ಕಲ್ಲಡ್ಕ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ಜರಗಿತು.
ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಕೃಷ್ಣ ಭಟ್ ಅಜ್ಜಿಮೂಲೆ ಸಭೆಯ ಅಧ್ಯಕ್ಷತೆವಹಿಸಿದ್ದರು. ಕುಂಬ್ಡಾಜೆ ಗ್ರಾ.ಪಂ.ಉಪಾಧ್ಯಕ್ಷೆ ಎಲಿಜಬೆತ್ ಕ್ರಾಸ್ತ,ಅಗಲ್ಪಾಡಿ ಶಾಲಾ ಶಿಕ್ಷಕ ಗಿರೀಶ್ ಮಾಸ್ತರ್, ಮುಳ್ಳೇರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ಚಂದ್ರಶೇಖರ್ ಶುಭಾಶಂಸನೆಗೈದರು.ಸಭೆಯಲ್ಲಿ ಸಾಮಾಜಿಕ ಧಾರ್ಮಿಕ ಮುಂದಾಳು ಶ್ರೀಕೃಷ್ಣ ಭಟ್ ಅಜ್ಜಿಮೂಲೆ ಅವರನ್ನು ಸನ್ಮಾನಿಸಲಾಯಿತು. ಕ್ಲಬ್ಬಿನ ಅಧ್ಯಕ್ಷ ಮಹೇಶ್ ಅಜ್ಜಿಮೂಲೆ ಉಪಸ್ಥಿತರಿದ್ದರು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜೋನ್ ಕ್ರಾಸ್ತಾ ಸ್ವಾಗತಿಸಿ ಅಖಿಲೇಶ್ ವಂದಿಸಿದರು.ರಾಜೇಶ್ ಅಜ್ಜಿಮೂಲೆ ನಿರೂಪಿಸಿದರು.