HEALTH TIPS

ಕೋವಿಡ್ ಲಸಿಕೆಗಳ ಖರೀದಿಗೆ ₹ 36,397 ಕೋಟಿ ಖರ್ಚು: ಪ್ರತಾಪರಾವ್ ಜಾಧವ್

          ನವದೆಹಲಿ: ರಾಷ್ಟ್ರೀಯ ಕೋವಿಡ್ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತ ಪೂರೈಕೆಗಾಗಿ ಕೋವಿಡ್ ಲಸಿಕೆಗಳನ್ನು ಖರೀದಿಸಲು ಭಾರತ ಸರ್ಕಾರ ಇಲ್ಲಿಯವರೆಗೆ ₹36,397.65 ಕೋಟಿ ವೆಚ್ಚ ಮಾಡಿದೆ ಎಂದು ಆರೋಗ್ಯ ರಾಜ್ಯ ಸಚಿವ ಪ್ರತಾಪರಾವ್ ಜಾಧವ್ ಶುಕ್ರವಾರ ಲೋಕಸಭೆಗೆ ತಿಳಿಸಿದ್ದಾರೆ.

              2024 ಜುಲೈ 29ರ ಮಾಹಿತಿಯಂತೆ ದೇಶದಾದ್ಯಂತ ಒಟ್ಟು 220.68 ಕೋಟಿ ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ ಎಂದು ಜಾಧವ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

             ಅಲ್ಲದೇ ಭಾರತವು 99 ದೇಶಗಳಿಗೆ ಮತ್ತು ವಿಶ್ವಸಂಸ್ಥೆಗೆ ಒಟ್ಟು 3012.465 ಲಕ್ಷ ಕೋವಿಡ್-19 ಲಸಿಕೆಗಳನ್ನು ರವಾನಿಸಿದೆ ಎಂದು ಜಾಧವ್ ಹೇಳಿದ್ದಾರೆ.

               ಕೋವಿಡ್ -19 ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಸುಮಾರು ₹60 ಕೋಟಿ ಖರ್ಚು ಮಾಡಿದೆ ಎಂದು ಅವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries