ಕೊಲಂಬೊ: ಶ್ರೀಲಂಕಾದಲ್ಲಿ ಸೆಪ್ಟೆಂಬರ್ 21ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮೂವರು ತಮಿಳರು ಮತ್ತು ಇಬ್ಬರು ಬೌದ್ಧ ಸನ್ಯಾಸಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.
ಕೊಲಂಬೊ: ಶ್ರೀಲಂಕಾದಲ್ಲಿ ಸೆಪ್ಟೆಂಬರ್ 21ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಮೂವರು ತಮಿಳರು ಮತ್ತು ಇಬ್ಬರು ಬೌದ್ಧ ಸನ್ಯಾಸಿಗಳು ಸೇರಿದಂತೆ ಒಟ್ಟು 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಗುರುವಾರ ತಿಳಿಸಿದೆ.
39 ಮಂದಿ ಅಧ್ಯಕ್ಷೀಯ ಆಕಾಂಕ್ಷಿಗಳ ಪೈಕಿ ಒಬ್ಬರು ಕೂಡ ಮಹಿಳಾ ಅಭ್ಯರ್ಥಿ ಇಲ್ಲ.
ನಾಮ ಪತ್ರ ಸಲ್ಲಿಸಲು ಇಂದು ಕೊನೆಯ ದಿನ. ದಾಖಲೆಯ 39 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ. 40 ಮಂದಿ ಠೇವಣಿ ಪಾವತಿಸಿದ್ದರು. ಅವರಲ್ಲಿ ಒಬ್ಬರು ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದಾರೆ. ಮೂರು ಅಭ್ಯರ್ಥಿಗಳ ವಿರುದ್ಧ ಮೂರು ಆಕ್ಷೇಪಣೆಗಳಿದ್ದು, ಅವರ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಆರ್‌ಎಂಎಎಲ್ ರತ್ನಾಯಕ್ ತಿಳಿಸಿದ್ದಾರೆ.
2022ರಲ್ಲಿ ಆರ್ಥಿಕವಾಗಿ ದಿವಾಳಿಯಾದ ನಂತರ ಶ್ರೀಲಂಕಾದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ರಾಷ್ಟ್ರದಾದ್ಯಂತ 1.7 ಕೋಟಿಗೂ ಹೆಚ್ಚು ಅರ್ಹ ಮತದಾರರಿದ್ದಾರೆ.
ಹಾಲಿ ಅಧ್ಯಕ್ಷ ವಿಕ್ರಮಸಿಂಘೆ ಅಲ್ಲದೆ, ಇತರ ಪ್ರಮುಖ ಅಭ್ಯರ್ಥಿಗಳೆಂದರೆ ರಾಜಪಕ್ಸೆ ರಾಜವಂಶದ ಉತ್ತರಾಧಿಕಾರಿ ನಮಲ್ ರಾಜಪಕ್ಸೆ, ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಮತ್ತು ಮಾರ್ಕ್ಸ್‌ವಾದಿ ಜೆವಿಪಿ ನಾಯಕ ಅನುರಾ ಕುಮಾರ ದಿಸಾನಾಯಕೆ ಕಣದಲ್ಲಿದ್ದಾರೆ.