ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶಾಲೆಯ ಮೊದಲ ಮಹಡಿಯ ಬಾಲ್ಕನಿ ಕುಸಿದು, ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶಾಲೆಯ ಮೊದಲ ಮಹಡಿಯ ಬಾಲ್ಕನಿ ಕುಸಿದು, ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದಿನೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಅವಧ್ ಅಕಾಡೆಮಿ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬೆಳಿಗ್ಗೆ ಅಸೆಂಬ್ಲಿಯಲ್ಲಿ ಭಾಗವಹಿಸಲು ಮೊದಲ ಮಹಡಿಯಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾಗ ಬಾಲ್ಕನಿ ಕುಸಿದಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಗೊಂಡ ಮಕ್ಕಳಿಗೆ ಶಾಲೆಯ ಸಮೀಪದಲ್ಲೇ ಇದ್ದ ಜಹಂಗೀರಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಜಿಲ್ಲಾಸ್ಪತ್ರೆಗೆ ಭರ್ತಿ ಮಾಡಲಾಯಿತು.
ಅವಶೇಷಗಳಡಿಯಲ್ಲಿ ಸಿಲುಕಿದ್ದ ಅನೇಕ ಮಕ್ಕಳನ್ನು ರಕ್ಷಿಸಲಾಗಿದೆ. ವಿದ್ಯಾರ್ಥಿಗಳ ಕೈ, ಕಾಲು, ಕುತ್ತಿಗೆ ಸೇರಿದಂತೆ ದೇಹದ ಭಾಗಗಳಿಗೆ ಗಾಯಗಳಾಗಿವೆ.
ಗಾಯಗೊಂಡ ವಿದ್ಯಾರ್ಥಿಗೆ ಚಿಕಿತ್ಸೆ